ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಈ ನಡುವೆ ಚುನಾವಣೆ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಎಲೆಕ್ಷನ್ ಕಮಿಷನ್ ತೀವ್ರ ನಿಗಾ ವಹಿಸಿದೆ. ಈ ನಿಟ್ಟಿನಲ್ಲಿ ಮಾರ್ಚ್ ನಿಂದ ಏಪ್ರಿಲ್ 13ರವರೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದೆ.
ಮಾರ್ಚ್ 1 ರಿಂದ ಏಪ್ರಿಲ್ 13ರವರೆಗೆ ವಿವಿಧ ಏಜೆನ್ಸಿಗಳ ಸಹಾಯದಿಂದ 4,658 ಕೋಟಿ ಮೌಲ್ಯದ ಹಣ, ಹೆಂಡ, ಚಿನ್ನ, ಬೆಳ್ಳಿ, ಡ್ರಗ್ಸ್ ಇತ್ಯಾದಿಗಳನ್ನು ಜಪ್ತಿ ಮಾಡಲಾಗಿದೆ.
395 ಕೋಟಿ ನಗದು ಹಣ, 489 ಕೋಟಿ ಮೌಲ್ಯದ ಹೆಂಡ, 2,069 ಕೋಟಿ ಮೌಲ್ಯದ ಡ್ರಗ್ಸ್, 562 ಕೋಟಿ ಮೌಲ್ಯದ ಅಮೂಲ್ಯ ಲೋಹಗಳು, 1143 ಕೋಟಿ ಮೌಲ್ಯದ ಉಡುಗೊರೆಗಳನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.