ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ.

ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸು ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಜರ್ನಿಯನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!