ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಧಾಕರ್ ಆರೋಗ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ, ಎಲ್ಲ ದಾಖಲೆಗಳಿವೆ, ಶೀಘ್ರವೇ ಜೈಲಿಗೆ ಹೋಗೋದು ಗ್ಯಾರೆಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದು, ಭ್ರಷ್ಟರು ಸಂಸತ್ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ. ಸುಧಾಕರ್ ಕುರಿತ ಹಗರಣದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್ ನೂರಕ್ಕೆ ನೂರಷ್ಟು ಜೈಲಿಗೆ ಹೋಗುತ್ತಾರೆ ಎಂದು ಕಿಡಿಕಾರಿದರು.
ಬಿಜೆಪಿಯಲ್ಲಿ ಮಂತ್ರಿಯಾಗಿ ಹಣ ಲೂಟಿ ಹೊಡೆದಿದ್ದಾನೆ ಎಂದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದೀರಿ. ರಾಜಕೀಯ ಲಾಭಿ ನಡೆಸಿ ಈ ಭಾರಿ ಎನ್.ಡಿ.ಎ ಟಿಕೆಟ್ ಪಡೆದಿದ್ದಾನೆ ಎಂದು ವಾಗ್ದಾಳಿ ನಡೆಸಿದರು.