ಹೊಸದಿಗಂತ ವರದಿ, ಶಿವಮೊಗ್ಗ:
ನಟ ದರ್ಶನ್ ಮಂಡ್ಯಕ್ಕೆ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ದರ್ಶನ್ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ಅದಕ್ಕೆ ಪ್ರತಿಕ್ರಿಯೆ ನೀಡುವಂಥದ್ದು ಏನೂ ಇಲ್ಲ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುರಿತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ದೇವೇಗೌಡರು ಹೇಳಿದ್ದು 30- 35 ವರ್ಷದ ಹಿಂದಿನ ಕಥೆ. ಅದಕ್ಕೆ ದಾಖಲೆ ಇದೆ ಎಂದು ದೇವೇಗೌಡರೇ ಹೇಳಿದ್ದಾರೆ ಎಂದರು.