ಹೊಸದಿಗಂತ ಡಿಜಿಟಲ್ ಡೆಸ್ಕ್:
ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಅಬ್ಬರದಿಂದ ಮುಂಬೈ ಇಂಡಿಯನ್ಸ್ 7 ವಿಕೆಟ್ ನಷ್ಟಕ್ಕೆ 192 ರನ್ ಸಿಡಿಸಿದೆ. ಪಂಜಾಬ್ ಗೆಲುವಿಗೆ 193 ರನ್ ಟಾರ್ಗೆಟ್ ಪಡೆದಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ ಇಂಡಿಯನ್ಸ್ ಆರಂಭ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಇಶಾನ್ ಕಿಶನ್ ಕೇವಲ 8 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಹೋರಾಟ ಮುಂಬೈ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ರೋಹಿತ್ ಶರ್ಮಾ 36 ರನ್ ಸಿಡಿಸಿ ಔಟಾದರು.
ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್‌ನಿಂದ ಮುಂಬೈ ಇಂಡಿಯನ್ಸ್ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು. ಸೂರ್ಯಕುಮಾರ್ ಯಾದವ್ 53 ಎಸೆತದಲ್ಲಿ 78 ರನ್ ಸಿಡಿಸಿ ಔಟಾದರು.
ನಾಯಕ ಹಾರ್ದಿಕ್ ಪಾಂಡ್ಯ ಕೇವಲ 10 ರನ್ ಸಿಡಿಸಿ ನಿರಾಸೆ ಅನುಭವಿಸಿದರು. ಟಿಮ್ ಡೇವಿಡ್ 14 ರನ್ ಸಿಡಿಸಿದರು. ರೊಮಾರಿಯಾ ಶೇಫರ್ಡ್ ಕೇವಲ 1ರನ್ ಸಿಡಿಸಿದರೆ, ಮೊಹಮ್ಮದ್ ನಬಿ ರನೌಟ್‌ಗೆ ಬಲಿಯಾದರು. ಇತ್ತ ಅಜೇಯ ಹೋರಾಟ ನೀಡಿದ ತಿಲಕ್ ವರ್ಮಾ 18 ಎಸೆತದಲ್ಲಿ 34 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 7 ವಿಕೆಟ್ ಕಳೆದುಕೊಂಡು 192 ರನ್ ಸಿಡಿಸಿತು.