ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ಸಾಲು ಸಾಲು ಬೆಂಕಿ ಅವಘಡ ಸಂಭವಿಸಿದೆ. ಥಿನ್ನರ್ ಉತ್ಪಾದನಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದ ಅಂಬೇಡ್ಕರ್ ಎಸ್ಟೇಟ್ ಎಂಬಲ್ಲಿ ಈ ಘಟನೆ ನಡೆದಿದೆ. ಮಾ ಟ್ರೇಡರ್ಸ್ ನ ಥಿನ್ನರ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ತೀವ್ರತೆಯಿಂದಾಗಿ, ಥಿನ್ನರ್ ಕ್ಯಾನ್ ಗಳು ಸ್ಪೋಟಗೊಳ್ಳುತ್ತಿವೆ. ಸುತ್ತಮುತ್ತಲಿನ ಕಾರ್ಖಾನೆಗಳಿಗೂ ಬೆಂಕಿ ವ್ಯಾಪಿಸುವ ಆತಂಕವಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಇಂದು ಭಾನುವಾರವಾಗಿದ್ದು, ಕಾರ್ಖಾನೆಯಲ್ಲಿ ಕಾರ್ಮಿಕರು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.