ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ರಾಜ್ಯಕ್ಕೆ ಚೊಂಬು ನೀಡಿದೆ ಎಂಬ ಕಾಂಗ್ರೆಸ್ ಪ್ರಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾಂಗ್ರೆಸ್ ಜಾಹೀರಾತು ಬಿಡುಗಡೆ ಮಾಡಲಿ, ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಯಾವುದೇ ಆಯ್ಕೆ ಮಾಡಿದರೂ ಈ ಬಾರಿಯೂ ಮೋದಿಯವರನ್ನ ಜನ ಗೆಲ್ಲಿಸುತ್ತಾರೆ.
ರೈತರ ಸಾಲ ಮನ್ನಾ ಮತ್ತು ಕಾಂಗ್ರೆಸ್‌ನಿಂದ ಹೊಸ ಭರವಸೆಗಳ ಕುರಿತು ಮಾತನಾಡಿದ ವಿಜಯೇಂದ್ರ, ದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಮತ್ತು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು. ದೇಶದಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಒಂದು ಸಮುದಾಯದ ಓಲೈಕೆಗಾಗಿ ಕೆಲಸ ಮಾಡುತ್ತಿದೆ. ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಬಿಜೆಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.