WEATHER | ಛತ್ರಿ ಹಿಡಿದುಕೊಂಡು ಹೋಗಿ, ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯೋ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಬಹುತೇಕ ವರುಣನ ಆಗಮನ ಆಗಿದ್ದರೂ ಕೆಲ ಜಿಲ್ಲೆಗಳಲ್ಲಿ ಇನ್ನೂ ವರ್ಷಧಾರೆಯೇ ಆಗಿಲ್ಲದೆ ಜನ ಹೈರಾಣಾಗಿದ್ದಾರೆ.

ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!