ಪ್ರಚಾರಕ್ಕೆ ತೆರಳಿದ್ದ ವೇಳೆ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಕಡೂರಿನಲ್ಲಿ ಅಪಘಾತಕ್ಕೀಡಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿರುವ ಹೇಮಗಿರಿ ಗೇಟ್ ಬಳಿ ಗುಜರಿ ಆಟೋವೊಂದಕ್ಕೆ ಗುದ್ದಿದ್ದು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಧುಸ್ವಾಮಿ ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಚಾಲಕನಿಗೆ ಕಡೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಾಧುಸ್ವಾಮಿ ಅವರ ಕಾರು ಹೆಚ್ಚು ಜಖಂಗೊಂಡಿಲ್ಲ. ವಾಹನದ ಎಡಭಾಗದಲ್ಲಿ ತರಚಿದ ಗುರುತುಗಳನ್ನು ನೋಡಬಹುದು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣಅವರ ಪರ ಬಿರೂರುನಲ್ಲಿ ಪ್ರಚಾರ ಮಾಡಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!