ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದುವರೆಗೂ ಕೇಂದ್ರದಿಂದ ಆಗಿರುವ ಅನ್ಯಾಯಗಳನ್ನು ವಿರೋಧಿಸಿ ಇಂದು ರಾಜ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಸೋಮವಾರದ ಒಳಗೆ ಬರ ಪರಿಹಾರ ಕೊಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಹೇಳಿದ ಬೆನ್ನಲ್ಲೇ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆಗೆ ನಿರ್ಧರಿಸಿದೆ.
ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು, ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಇದುವರೆಗೆ ಕೇಂದ್ರ ಮಾಡಿರುವ ಅನ್ಯಾಯ ಖಂಡಿಸಿ ಪ್ರತಿಭಟಿಸಲು ನಿರ್ಧರಿಸಲಾಗಿದೆ.
ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸೋಮವಾರ ಸುಪ್ರೀಂಕೋರ್ಟ್ಗೆ ಹೇಳಿದ್ದಾರೆ