March 5, 2026
Thursday, March 5, 2026
spot_img

WEATHER | ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಆದರೀಗ ಕೆಲ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ಬೆಚ್ಚಗಿನ ಉಡುಪು ಧರಿಸಿ ಸುರಕ್ಷಿತವಾಗಿರುವಂತೆ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !