Sunday, January 11, 2026

ಜಮ್ಮು-ಕಾಶ್ಮೀರದಲ್ಲಿ ʼಪಾಕಿಸ್ತಾನ ಜಿಂದಾಬಾದ್ʼ ಎಂದು ಬರೆದಿರುವ ಬಲೂನ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಉರ್ದುವಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಬಲೂನ್ ಪತ್ತೆಯಾಗಿದೆ. ಸಾಂಬಾ ಜಿಲ್ಲೆಯ ರಾಮಗಢ ಪ್ರದೇಶದ ಖಾನ್‌ಪುರ ಗ್ರಾಮದ ಹೊಲದಲ್ಲಿ ಗುರುವಾರ ಅನುಮಾನಾಸ್ಪದ ಬಲೂನೊಂದು ಪತ್ತೆಯಾಗಿದ್ದು, ಇದು ಪೊಲೀಸರ ತನಿಖೆಗೆ ಕಾರಣವಾಗಿದೆ.

ಉರ್ದು ಭಾಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದ ಬಲೂನನ್ನು ಸ್ಥಳೀಯ ನಿವಾಸಿಯೊಬ್ಬರು ನೋಡಿದ್ದರು ಕೂಡಲೇ ರಾಮಘಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಲೂನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಬಲೂನ್ ಪ್ರಸ್ತುತ ರಾಮಗಢ ಪೊಲೀಸ್ ಠಾಣೆಯಲ್ಲಿದ್ದು, ಅಧಿಕಾರಿಗಳು ನಿವಾಸಿಗಳು ಜಾಗರೂಕರಾಗಿರಿ ಮತ್ತು ಅಂತಹ ಯಾವುದೇ ವಸ್ತುಗಳು ಕಂಡುಬಂದರೆ ತಕ್ಷಣ ವರದಿ ಮಾಡುವಂತೆ ಸೂಚಿಸಿದ್ದಾರೆ.

ಸಾಂಬಾ ಜಿಲ್ಲೆಯ ಕಟ್ಲಿ ಪ್ರದೇಶದಲ್ಲಿ ಶಂಕಿತ ವ್ಯಕ್ತಿಯೊಬ್ಬ ಶಸ್ತ್ರಾಸ್ತ್ರ ಹೊತ್ತುಕೊಂಡು ಹೋಗುತ್ತಿರುವುದನ್ನು ನೋಡಿರುವುದಾಗಿ ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದರು, ಭದ್ರತಾ ಪಡೆಗಳು ಪ್ರತ್ಯೇಕವಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಕಾಡಿನಲ್ಲಿ ಅಡಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಬುಧವಾರ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಬುಧವಾರ ಸಂಜೆ ಬಿಲ್ಲಾವರ್‌ನ ಕಹೋಗ್ ಗ್ರಾಮದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಬಳಿಕ ಎನ್​ಕೌಂಟರ್ ಕೂಡ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!