ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮತ್ತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಅಜಯ್ ಸ್ವರೂಪ್ ಅವರು ಸೋನಿಯಾ ಗಾಂಧಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಡಾ. ಅಜಯ್ ಸ್ವರೂಪ್ ಅವರ ಪ್ರಕಾರ, ಸೋನಿಯಾ ಗಾಂಧಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡುವ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸೋನಿಯಾ ಗಾಂಧಿಯವರ ಆರೋಗ್ಯ ಹದಗೆಟ್ಟ ನಂತರ ಸೋಮವಾರ ರಾತ್ರಿ 10 ಗಂಟೆಗೆ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಉಸಿರಾಟದ ತೊಂದರೆ ಉಂಟಾಗಿತ್ತು ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಶೀತ ಹವಾಮಾನ ಮತ್ತು ಮಾಲಿನ್ಯದ ಸಂಯೋಜಿತ ಪರಿಣಾಮಗಳಿಂದಾಗಿ ಅವರ ಶ್ವಾಸನಾಳದಲ್ಲಿ ತುಸು ಏರುಪೇರಾಗಿದೆ ಎಂದು ತಿಳಿದುಬಂದಿತ್ತು.

