Sunday, January 11, 2026

ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಫೈನಲ್‌ ಆಗಿಲ್ಲ: ಅಮೆರಿಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ವೈಯಕ್ತಿಕವಾಗಿ ಕರೆ ಮಾಡದ ಕಾರಣ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.

ನಾನು ಒಪ್ಪಂದ ಮಾಡಿದ್ದೇನೆ. ಆದರೆ ಮೋದಿ ಅವರು ಟ್ರಂಪ್ ಅವರಿಗೆ ಕರೆ ಮಾಡಬೇಕಾಗಿತ್ತು. ಆದರೆ ಮೋದಿ ಕರೆ ಮಾಡಲಿಲ್ಲ ಎಂದು ಲುಟ್ನಿಕ್ ಪಾಡ್‌ಕ್ಯಾಸ್ಟ್‌ನಲ್ಲಿ ತಿಳಿಸಿದರು.

ಉದ್ಯಮಿಗಳು ಆಯೋಜಿಸಿದ್ದ ಆಲ್-ಇನ್ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಲುಟ್ನಿಕ್, ಭಾರತ ಮೊದಲು ಒಪ್ಪಂದವನ್ನು ಅಂತಿಮಗೊಳಿಸುತ್ತದೆ ಎಂದು ನಂಬಿ ಅಮೆರಿಕವು ಇತರ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆ ನಡೆಸಿತ್ತು ಎಂದು ಹೇಳಿದರು.

ನಾವು ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ವಿಯೆಟ್ನಾಂನೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದ್ದೇವೆ. ಅವರಿಗಿಂತ ಮೊದಲು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಹುದು ಎಂದು ಭಾವಿಸಿದ್ದೆವು. ನಂತರ ಭಾರತ ವ್ಯಾಪಾರ ಒಪ್ಪಂದದಿಂದ ಹಿಂದೆ ಸರಿಯಿತು ಎಂದರು.  

error: Content is protected !!