Sunday, January 11, 2026

ಶಾಲಾ ಸಿಬ್ಬಂದಿಯಿಂದಲೇ ಕೋಟಿ ಕೋಟಿ ಹಣ ವಂಚನೆ: ಇಬ್ಬರು ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಭಾರೀ ಹಣಕಾಸು ಅಕ್ರಮ ಬೆಳಕಿಗೆ ಬಂದಿದೆ. ಶಾಲೆ ಹಾಗೂ ಶಿಕ್ಷಣ ಟ್ರಸ್ಟ್‌ಗೆ ಸೇರಿದ್ದ ಸುಮಾರು ನಾಲ್ಕು ಕೋಟಿ ರೂ. ಮೊತ್ತವನ್ನು ವಂಚಿಸಿರುವ ಆರೋಪದಡಿ ನಾಲ್ವರು ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

2017ರಿಂದ ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಶುಲ್ಕದ ಹಣವನ್ನು ದುರುಪಯೋಗ ಮಾಡಿಕೊಂಡು ಸ್ವಂತ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಲೆ ಹಾಗೂ ಟ್ರಸ್ಟ್‌ನಲ್ಲಿ ಅಕೌಂಟೆಂಟ್‌ಗಳು ಮತ್ತು ಸಾರಿಗೆ ವಿಭಾಗದ ಇನ್ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಸಾಗರ್, ಮುರುಳಿ, ಮನೋಜ್, ಮೋಹನ್ ಮತ್ತು ಕಿಶೋರ್ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Kitchen tips | ಅಡುಗೆ ಮನೆಯ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ರೆ ಈ ರೀತಿ ತೆಗೆದುಬಿಡಿ!

ಈ ಕುರಿತು ಶಿಕ್ಷಣ ಸಂಸ್ಥೆಯ ನಿರ್ದೇಶಕರು ಸಿಸಿಬಿಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದು, ಸಾಗರ್ ಮತ್ತು ಮನೋಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!