ಹೊಸದಿಗಂತ ಡಿಜಿಟಲ್ ಡೆಸ್ಕ್:
ಇವಿಎಂ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ಚಾಮರಾಜನಗರ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮರುಮತದಾನ ಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಾಮರಾಜನಗರ ಲೋಕಸಭೆ ಕ್ಷೇತ್ರದ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಿಗದಿಯಾಗಿದೆ. ಮತಗಟ್ಟೆ ಇಂಡಿಗನತ್ತ ಹಾಗೂ ಮೆಂದಾರೆ ಎರಡೂ ಗ್ರಾಮಗಳು 528 ಮತದಾರರಿಗೆ ಮತ್ತೊಮ್ಮೆ ಚುನಾವಣೆ ನಡೆಸಿದೆ. ಇದುವರೆಗೆ 528 ಮತದಾರರಲ್ಲಿ ಕೇವಲ 54 ಮತ ಚಲಾವಣೆ ಮಾಡಿದ್ದಾರೆ. ಮೆಂದಾರೆ ಹಾಡಿಯ 54 ಜನರಿಂದ ಮತದಾನವಾಗಿದೆ.
ಇಂದು ಮಧ್ಯರಾತ್ರಿಯೊಳಗೆ ಮತಗಟ್ಟೆ ಸುತ್ತಮುತ್ತಲಿನ 100 ಮತಗಟ್ಟೆಗಳಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.