ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಏಕಾಏಕಿ ನಾಪತ್ತೆ, ನೀರು ಪಾಲಾಗಿರುವ ಶಂಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಸಂಗಮದಲ್ಲಿ ಐವರು ವಿದ್ಯಾರ್ಥಿಗಳು ಈಜಲು ತೆರಳಿದ್ದ ವೇಳೆ ನೀರುಪಾಲಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಈಜಲು ಮೇಕೆದಾಟು ಸಂಗಮದಲ್ಲಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾರೆ. ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಶಂಕೆ ಇದೆ.

ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣೆ ಪೊಲಿಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!