ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮಹತ್ವಾಕಾಂಕ್ಷೆಯ ಅಂತರ್ ಜಿಲ್ಲಾ ಕಾರಿಡಾರ್ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ.
ಈ ಯೋಜನೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ಆರ್ವೀ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್‌ಗೆ ಡಿಪಿಆರ್ ಸಲಹಾ ಕಾರ್ಯವನ್ನು ನೀಡಿದೆ. ಸಂಸ್ಥೆಯು 1.2 ಕೋಟಿ ರೂ. ವೆಚ್ಚದ 59.60 ಕಿಮೀ ಉದ್ದದ ಮೆಟ್ರೋ ಮಾರ್ಗಕ್ಕಾಗಿ ಡಿಪಿಆರ್ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದರ ಟೆಂಡರ್‌ಗಳನ್ನು ನವೆಂಬರ್ 2025 ರಲ್ಲಿ ಕರೆಯಲಾಯಿತು. ಇನ್ನು ಈ ಕಾರಿಡಾರ್ಗಾಗಿ ಅಧಿಕಾರಿಗಳು ಹಾಗೂ ತಜ್ಞರು ಕ್ಷೇತ್ರಮಟ್ಟದ ಅಧ್ಯಯನವನ್ನು ಪ್ರಾರಂಭಿಸಿದ್ದಾರೆ. ಹಾಗೂ ನಮ್ಮ ಮೆಟ್ರೋದ 4ನೇ ಹಂತದ ವಿಸ್ತರಣೆಯ ಭಾಗವಾಗಿರುವ ಈ ಯೋಜನೆಯು 20,649 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಯಾವೆಲ್ಲಾ ನಿಲ್ದಾಣಗಳು
ಮಕಾಲಿ, ದಾಸನಪುರ, ನೆಲಮಂಗಲ, ನೆಲಮಂಗಲ ಟೋಲ್‌ಗೇಟ್, ಬೇಗೂರ್,ತಿಪ್ಪಗೊಂಡನಹಳ್ಳಿ, ಸೋಂಪುರ ಕೈಗಾರಿಕಾ ಪ್ರದೇಶ, ಡಾಬ್ಸ್‌ಪೇಟೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಕ್ಯಾತ್ಸಂದ್ರ, ತುಮಕೂರು ಬಸ್ ನಿಲ್ದಾಣ, ತುಡಾ ಲೇಔಟ್, ನಾಗಣ್ಣನಪಾಳ್ಯ

