Sunday, January 11, 2026

ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಹೃದಯಾಘಾತದ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಯುವ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅಚಾನಕ್ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತ ವಿದ್ಯಾರ್ಥಿಯನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ.

ಗಣೇಶ್ ಶಿವಮೊಗ್ಗದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಓದಿನಲ್ಲಿ ಚುರುಕಾಗಿದ್ದ ಪ್ರತಿಭಾವಂತ ವಿದ್ಯಾರ್ಥಿ ಎಂದು ಸಹಪಾಠಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: FOOD | ಭಾನುವಾರದ ವಿಶೇಷ ಗೊಜ್ಜವಲಕ್ಕಿ! ನೀವೂ ಒಮ್ಮೆ ಟ್ರೈ ಮಾಡಿ

ಗುರುವಾರ ಬೆಳಿಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆ ಗಣೇಶ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ವಿಷಯ ತಿಳಿದ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಯುವಕ ಮೃತಪಟ್ಟಿರುವುದು ವೈದ್ಯರು ದೃಢಪಡಿಸಿದ್ದಾರೆ.

error: Content is protected !!