ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯರ ನಿರ್ಲಕ್ಷ್ಯದಿಂದಾಗಿ ಹೆರಿಗೆ ವೇಳೆ ತಾಯಿ ಹಾಗೂ ಮಗು ಮೃತಪಟ್ಟಿದ್ದು, ಮೃತರ ಸಂಬಂಧಿಕರು ಆಸ್ಪತ್ರೆಯಲ್ಲಿ ಧರಣಿ ಕುಳಿತಿದ್ದಾರೆ.
ಕುಷ್ಟಗಿ ತಾಲೂಕಿನ ತಾವರೇಗಾರ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದ್ದು, ಪ್ರತಿಭಟನೆ ಬಿಸಿ ಕಾವೇರುತ್ತಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ಲಕ್ಷ್ಮಿ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರನ್ನು ತಾವರಗೇರಾ ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಹೆರಿಗೆ ಸಮಯದಲ್ಲಿ ಲಕ್ಷ್ಮೀ ಮೃತಪಟ್ಟಿದ್ದಾರೆ. ಇನ್ನು ಹೊಟ್ಟೆಯಲ್ಲಿದ್ದ ಶಿಶು ಕೂಡ ಮೃತಪಟ್ಟಿದೆ. ಇನ್ನು ಗರ್ಭಿಣಿ ಮತ್ತು ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಸೂಕ್ತ ಸಮಯದಲ್ಲಿ ಹೆರಿಗೆ ಮಾಡದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗು ಮೃತಪಟ್ಟಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.