ದಿಗಂತವರದಿ ಮಂಗಳೂರು:
ರಾಜ್ಯದಾದ್ಯಂತ ತಾಪಮಾನ ಹೆಚ್ಚಾಗಿದೆ. ಅದರಲ್ಲಿಯೂ ಉಡುಪಿಯಲ್ಲಿ ಬಿಸಿಲು ಕುತ್ತಿಗೆಗೆ ಬಂದಿದೆ.
ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.