ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಕಿರುತೆರೆಯ ನಟಿ, ಸಿನಿಮಾ ನಿರ್ದೇಶಕ ಅನಿಲ್ ಗಂಗೂಲಿ ಅವರ ಪುತ್ರಿ ರೂಪಾ ಗಂಗೂಲಿ ಬಿಜೆಪಿ (BJP)ಗೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ಮುಖಂಡರಾದ ಅನಿಲ್ ಬಲುನಿ ಹಾಗೂ ವಿನೋದ್ ತಾವ್ಡೆ ಸಮ್ಮುಖದಲ್ಲಿ ಅವರು ಇಂದು ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ.
ಮೋದಿ (, Narendra Modi) ಅವರ ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದೇನೆ ಅಂದಿದ್ದಾರೆ.ಜನರಿಗೆ, ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ನನ್ನ ಕನಸು. ಅದನ್ನು ಆಗಲೇ ಮೋದಿ ಅವರು ಮಾಡುತ್ತಿದ್ದಾರೆ. ಅದನ್ನು ಗಮನಿಸಿಯೇ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನಗೆ ಇರಲಿ ಎಂದಿದ್ದಾರೆ .