ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಸಂಚಲನ ಮೂಡಿಸಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ರಾಹುಲ್ ಗಾಂಧಿ ಅವರ ಹೆಸರನ್ನು ಎಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಅಂತಿಮವಾಗಿ ಪ್ರಿಯಾಂಕಾ ಗಾಂಧಿ ಪ್ರಚಾರದಿಂದ ವಿರಾಮ ತೆಗೆದುಕೊಂಡಿದ್ದಾರೆ.
ಸೋನಿಯಾ ಗಾಂಧಿ ಪ್ರತಿನಿಧಿಸುವ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗಿದ್ದ ರೇಸ್ ನಿಂದ ದೂರ ಉಳಿಯಲಿದ್ದು, ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ರಾಹುಲ್ ಗಾಂಧಿ ವಯನಾಡು ಜೊತೆಗೆ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ.
ಎಐಸಿಸಿಯಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಅಮೇಥಿ ಕ್ಷೇತ್ರದಿಂದ ಕೆಎಲ್ ಶರ್ಮಾ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.