ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ಸಾಗಾಟಕ್ಕೆಂದೇ ಹೊಸ ವಿನ್ಯಾಸದ ಬಟ್ಟೆಯನ್ನು ಸಿದ್ಧಪಡಿಸಿದ್ದ ಆರೋಪಿ 20 ಲಕ್ಷ ರೂ. ನಗದು 275 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡು ಹೋಗುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಖಮ್ಮಂ ಮೂಲದ ವ್ಯಕ್ತಿಯೊಬ್ಬರಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ವ್ಯಕ್ತಿಯನ್ನು ಕೂಲಂಕಷವಾಗಿ ವಿಚಾರಣೆ ನಡೆಸಿದ ಪೊಲೀಸರು ಆತನ ಬಟ್ಟೆಯಡಿಯಲ್ಲಿ ಇರಿಸಲಾಗಿದ್ದ ಕಸ್ಟಮೈಸ್ ಮಾಡಿದ ಒಳಉಡುಪು ಸೇರಿದಂತೆ 2 ಲಕ್ಷ ರೂಪಾಯಿ ನಗದು ಮತ್ತು 275 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮೆಡಿಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುತಿಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ನಂತರ, ಮದುವೆಯಿರುವ ಕಾರಣ ಸಂಗ್ರಹಿಸಿಟ್ಟಿದ್ದೇನೆ ಬೇರೆ ಉದ್ದೇಶಕ್ಕೆ ಇಟ್ಟುಕೊಂಡಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಬಚ್ಚಿಟ್ಟಿರುವ ಹಣ ಮತ್ತು ಹಣದ ಬಗ್ಗೆ ಅನುಮಾನ ಮೂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.