ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧವೂ ಲುಕ್ ಔಟ್ ನೊಟೀಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಅವರು ತಂದೆ ಹೊಳೆನರಸೀಪುರ ಶಾಸಕ , ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ದವೂ ಕರ್ನಾಟಕದ ವಿಶೇಷ ತನಿಖಾ ದಳ (ಎಸ್‌ಐಟಿ) ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ.

ರೇವಣ್ಣ ದೇಶ ಬಿಟ್ಟು ಹೊಗುವುದನ್ನ ತಡೆಯುವ ಸಲುವಾಗಿ LOC ನೊಟೀಸ್ ನೀಡಲಾಗಿದೆ. ಎಸ್ಐಟಿ ಯಿಂದ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಕರಣ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ವಿದೇಶಕ್ಕೆ ಹಾರುವ ಯತ್ನ ತಡೆಯಲು ಮುಂದಾದ ಎಸ್ಐಟಿ ಈ ನೊಟೀಸ್‌ ಜಾರಿ ಮಾಡಿದೆ.

ಈಗಾಗಲೇ ರೇವಣ್ಣ ಸಂತ್ರಸ್ಥೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ನಾಳೆ ಇದರ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ. ನಾಳೆ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆಂದು ಅವರ ಪರ ವಕೀಲ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!