ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಬರಿಮಲೆ ಚಿನ್ನಾಭರಣ ಕಳ್ಳತನ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಶುಕ್ರವಾರ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರನ್ನು ಬಂಧಿಸಿದೆ.
ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು. ನಂತರ ಮಧ್ಯಾಹ್ನ ಎಸ್‌ಐಟಿ ಕಚೇರಿಗೆ ಸ್ಥಳಾಂತರಿಸಲಾಯಿತು. ಅಧಿಕೃತವಾಗಿ ಬಂಧಿಸಲಾಯಿತು.
ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪಾಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ ಪದ್ಮಕುಮಾರ್ ನೀಡಿದ ಹೇಳಿಕೆಗಳನ್ನು ಆಧರಿಸಿ ಇವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ಕೇರಳ ಹೈಕೋರ್ಟ್ ಎಸ್‌ಐಟಿ ರಚಿಸಿದ ನಂತರ ಪ್ರಕರಣದಲ್ಲಿ ಬಂಧಿತರಾದವರಲ್ಲಿ ರಾಜೀವರ 11 ನೇ ವ್ಯಕ್ತಿಯಾಗಿದ್ದಾರೆ.

