ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಮತ್ತು ತಪ್ಪಿತಸ್ಥರು ಯಾರು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಮಹಿಳೆ ತಾನಾಗಿಯೇ ವಿವಸ್ತ್ರಗೊಂಡಿದ್ದಾಳೆ ಎಂಬ ಮಾಹಿತಿ ಇದೆ. ಆದರೆ, ಈ ಬಗ್ಗೆ ಯಾವುದೇ ಸಂಶಯ ಉಳಿಯಬಾರದು ಎಂಬ ಕಾರಣಕ್ಕೆ ವಿವರವಾದ ತನಿಖೆಯ ಅಗತ್ಯವಿದೆ,” ಎಂದರು.


