Sunday, January 11, 2026

ಮಾನವ, ಕಾಡು ಪ್ರಾಣಿಗಳ ಸಂಘರ್ಷ ತಡೆಯಲು ಸೂಕ್ತ ಕ್ರಮ: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ವರದಿ,ಮಂಗಳೂರು:

ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿಯವರ ನೂತನ ಕಚೇರಿ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನವ ಪ್ರಾಣಿ ಸಂಘರ್ಷದಲ್ಲಿ ಹುಲಿ ಮತ್ತು ಆನೆ ಸಮಸ್ಯೆ ಅತಿಯಾಗಿದೆ. ಆನೆ ಸಮಸ್ಯೆ ಇತ್ಯರ್ಥ ಮಾಡಲು ಆನೆ ಕಾರ್ಯಪಡೆ ರಚನೆ ಮಾಡಿ, ಮಾನವ ಸಂಘರ್ಷ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದಲ್ಲಿ ಆನೆಗಳು ಜನವಸತಿ ಪ್ರದೇಶಕ್ಕೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಆನೆಗಳನ್ನು ಹಿಮ್ಮೆಟ್ಟಿಸುವ ಕ್ರಮ ಆಗುತ್ತಿದೆ. ೧೯೨೬ ಸಹಾಯವಾಣಿ ರಚಿಸಲಾಗಿದ್ದು, ಜನತೆ ಆನೆ ಸಮಸ್ಯೆ ತಲೆದೋರಿದಾಗ ಈ ಸಂಖ್ಯೆಗೆ ಕರೆ ಮಾಡಿದರೆ ತಕ್ಷಣ ಅರಣ್ಯ ಅಽಕಾರಿಗಳು ಸ್ಥಳಕ್ಕೆ ಧಾವಿಸಿ ಸ್ಪಂದಿಸಲಿದ್ದಾರೆ ಎಂದವರು ಹೇಳಿದರು.

ಅರಣ್ಯ ಪರಿಸರ ಸಂರಕ್ಷಣೆ ಮಾಡುವಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ನಂಬರ್ ವನ್ ಸ್ಥಾನದಲ್ಲಿದ್ದು, ಮಾದರಿಯಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಎಲ್ಲಾ ಕಡೆ ಕಮಾಂಡ್ ಸೆಂಟರ್ ಮಾಡಿದ್ದೇವೆ. ಬೆಂಗಳೂರಿನಲ್ಲಿ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕುದುರೆಮುಖ ಸುತ್ತಮುತ್ತಲಿನ ಅರಣ್ಯ ವಾಸಿಗಳನ್ನು ಸ್ಥಳಾಂತರ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅದನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

error: Content is protected !!