ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಮುಸ್ಲಿಂ ಕೋಟಾವನ್ನು ಬೆಂಬಲಿಸಿ, ಮೀಸಲಾತಿ ಪಡೆಯಬೇಕು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, “ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂದು ಹೇಳಿದರು. ಕರ್ನಾಟಕ ಮತ್ತು ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾವನ್ನು ಕಡಿಮೆ ಮಾಡುವ ಮೂಲಕ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದು ಸೋಮವಾರ ಬಿಹಾರದ ಉಜಿಯಾರ್‌ಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ನಂತರ ಅವರ ಹೇಳಿಕೆ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರ ‘ಅಬ್ಕಿ ಬಾರ್, 400 ಪಾರ್’ ಘೋಷಣೆಯ ಬಗ್ಗೆಯೂ ವಾಗ್ದಾಳಿ ನಡೆಸಿದ ಅವರು, ಮತಗಳು ನಮ್ಮ ಕಡೆ ಇವೆ. ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.