ದಿಗಂತ ವರದಿ ವಿಜಯನಗರ:
ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಮತದಾನ ಬಿರುಸಿನಿಂದ ಸಾಗಿದೆ. ಮಾಜಿ ಸಚಿವ ಆನಂದ್ ಸಿಂಗ್ ಕುಟುಂಬ ಸಮೇತರಾಗಿ ಬಂದು ಮತಚಲಾಯಿಸಿದರು.
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬೂತ್ ನಲ್ಲಿ ಮಾಜಿ ಸಚಿವ ಆನಂದ್ ಸಿಂಗ್, ಪತ್ನಿ ಲಕ್ಷ್ಮೀ, ತಾಯಿ ಸುನಿತಾ ಬಾಯಿ, ಪುತ್ರ ಸಿದ್ದಾರ್ಥ ಸಿಂಗ್ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಇನ್ನುಳಿದಂತೆ ನಗರ ಹಾಗೂ ಗ್ರಾಮೀಣ ಭಾಗದ ಮತಗಟ್ಟೆಗಳಲ್ಲಿ ಜನರು ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಹಕ್ಕು ಚಲಾಯಿಸಿದರು.