ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ ಎನ್ನಲಾಗಿದೆ.
ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು.
ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದಾರೆ ಎನ್ನಲಾಗಿದೆ. ಇದು ಡಿಕೆಶಿ ತಿನ್ನಿಸಿದ್ದಾರೋ ಎಂದು ಎಸೆದಿದ್ದಾರೋ, ಸಿಹಿ ಚೆನ್ನಾಗಿಲ್ಲ ಎಂದು ಎಸೆದಿದ್ದಾರೋ ಅಥವಾ ಸಿಹಿ ಆರೋಗ್ಯಕ್ಕೆ ಉತ್ತಮವಲ್ಲ ಎಂದು ಎಸೆದಿದ್ದಾರೋ ಸಿಎಂಗೆ ಮಾತ್ರ ಗೊತ್ತು!

