ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ. ತಮ್ಮ 75 ನೇ ವಯಸ್ಸಿನಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದು, ತಮ್ಮ ನಂತರ ಪ್ರಧಾನಿ ಅಭ್ಯರ್ಥಿ ಯಾರು ಎಂದು ಘೋಷಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಶುಕ್ರವಾರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ನಂತರ ಜೈಲಿನಿಂದ ಹೊರನಡೆದ ಅವರು ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬುತ್ತಿದೆ. 75ನೇ ವರ್ಷಕ್ಕೆ ಕಾಲಿಟ್ಟ ನಂತರ ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ್ದರು.
ಹೀಗಾಗಿಯೇ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿ ತೆರೆಮರೆಯಲ್ಲಿ ಉಳಿದರು. ಈಗ 75 ವರ್ಷಕ್ಕೆ ಕಾಲಿಡುತ್ತಿರುವ ಅವರು ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸಬೇಕು ಎಂದು ಹೇಳಿದ್ದಾರೆ.