ಬನ್ನಿ ಎಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ, ಪ್ರಜಾಪ್ರಭುತ್ವ ಬಲಪಡಿಸೋಣ: ಮತದಾನಕ್ಕೆ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಇಂದು ಪ್ರಾರಂಭವಾಗುತ್ತಿದೆ. ಇಂದು ಎಲ್ಲರೂ ಮತಗಟ್ಟೆಗಳಿಗೆ ಬಂದು ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಇಂದಿನ 4 ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಈ ಮೂಲಕ ಯುವ ಮತದಾರರು ಮತ್ತು ಮಹಿಳಾ ಮತದಾರರು ಶಕ್ತಿ ನೀಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ ಎಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!