ಮತ್ತೆ ಮೂವರು ನಕ್ಸಲರ ಹತ್ಯೆ: 5 ತಿಂಗಳಲ್ಲಿ 100ಕ್ಕೂ ಅಧಿಕ ಮಂದಿಯ ಎನ್‌ಕೌಂಟರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ ಮೂವರು ನಕ್ಸಲರನ್ನು (Naxals) ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. ಇದರೊಂದಿಗೆ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿಯೇ 100ಕ್ಕೂ ಅಧಿಕ ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ. ಕೆಲ ದಿನಗಳ ಹಿಂದಷ್ಟೇ ಛತ್ತೀಸ್‌ಗಢದಲ್ಲಿ 12 ಮಾವೋವಾದಿಗಳನ್ನು ಹತ್ಯೆಗೈಯಲಾಗಿತ್ತು.

ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡರು. ಇದೇ ವೇಳೆ ಇಬ್ಬರು ಮಹಿಳಾ ನಕ್ಸಲರು ಸೇರಿ ಒಟ್ಟು ಮೂವರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!