ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಜಾಮೀನು ಅರ್ಜಿ ತಿರಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಾಧ್ಯಕ್ಷ , ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ (ಪಿಎಂಎಲ್‌ಎ) ಸೋಮವಾರ ತಿರಸ್ಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಸೊರೇನ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮೇ 17ರ ಒಳಗೆ ಹೇಳಿಕೆ ದಾಖಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮೇ 3ರಂದು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸೊರೇನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಈ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವ ಮುನ್ನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಮಧ್ಯಂತರ ಜಾಮೀನು ನೀಡುವಂತೆಯೂ ಸೊರೇನ್ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!