ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಈ ವರ್ಷದ ಮೊದಲ ಮಳೆ ಅಬ್ಬರಿಸುತ್ತಿದ್ದು, ಹೀಗಾಗಿ ಹವಾಮಾನ ವೈಪರೀತ್ಯದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮುಂಬೈನ ಘಾಟ್‌ಕೋಪರ್, ಬಾಂದ್ರಾ ಕುರ್ಲಾ, ಧಾರಾವಿ ಪ್ರದೇಶದಲ್ಲಿ ಬಲವಾದ ಗಾಳಿ ಮತ್ತು ಮಳೆಯಾಗಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮತ್ತು ಟೇಕಾಫ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5:03ಕ್ಕೆ ಕಾರ್ಯಾಚರಣೆ ಪುನರಾರಂಭವಾಯಿತು. ಮುಂಬೈ ವಿಮಾನ ನಿಲ್ದಾಣವು ಕಳೆದ ವಾರ ತನ್ನ ಪೂರ್ವ ಮಾನ್ಸೂನ್ ರನ್‌ವೇ ನಿರ್ವಹಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು.