Sunday, January 11, 2026

ಚಾರ್ಮಾಡಿ ಘಾಟಿಯ ರಸ್ತೆಗೆ ಬಂದ ಒಂಟಿಸಲಗ: ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ರಸ್ತೆಗೆ ಅಡ್ಡಲಾಗಿ ಒಂಟಿ ಸಲಗ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ ಸುಮಾರು 2 ಕಿಲೋ ಮೀಟರ್‌ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೊಬೈಲ್ ನೆಟ್‌ವರ್ಕ್‌ ಇಲ್ಲದೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲು ಪ್ರವಾಸಿಗರು ಪರದಾಡಿದ್ದಾರೆ. ಕೆಲವರು ವಾಹನಗಳನ್ನು ವಾಪಸ್‌ ತಿರುಗಿಸಿಕೊಂಡು ತೆರಳಿದ್ದಾರೆ.

ಕಾಡಾನೆ ಕಾಣಿಸಿಕೊಂಡ ಹಿನ್ನೆಲೆ, ರಾತ್ರಿ ವೇಳೆ ಈ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೂ ಈ ಭಾಗದಲ್ಲಿ ಹಲವು ಬಾರಿ ಕಾಡಾನೆಗಳು ಕಾಣಿಸಿಕೊಂಡು ಆತಂಕ ಮೂಡಿಸಿದ್ದವು.

error: Content is protected !!