ಬೈಕ್‍ಗಳ ನಡುವೆ ಮುಖಾಮುಕಿ ಡಿಕ್ಕಿ: ಇಬ್ಬರು ಸಾವು, ಮತೊರ್ವನಿಗೆ ಗಂಭೀರ ಗಾಯ

ಹೊಸದಿಗಂತ ಮುಂಡಗೋಡ:

ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಬೈಕಗಳ ನಡುವೆ ಮುಖಾಮುಕಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟರೆ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ ಹಾಗೂ ಇಂದೂರ ಗ್ರಾಮದ ಯುವಕನೊಬ್ಬ ಮೃತಪಟ್ಟಿದ್ದಾರೆ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಇಂದೂರ ಗ್ರಾಮದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಥರಪಟ್ಟಿದ್ದಾನೆ ಇನ್ನೊಬ್ಬ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ.

ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ತಕ್ಷಣವೇ ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!