ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಹಳೆ ಮೈಸೂರು- ಬೆಂಗಳೂರು ಹೆದ್ದಾರಿಗೆ ಹೆಚ್ಚಿನ ಮಟ್ಟದಲ್ಲಿ ಮಳೆನೀರು ಸುರಿದು ಹೈರಾಣಾಗಿದೆ.
ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರುಗೆ ಇರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮಳೆನೀರು ಹೆಚ್ಚಿನ ಮಟ್ಟದಲ್ಲಿ ನಿಂತಿದೆ. ಇದರಿಂದ ಆ ರಸ್ತೆಯಲ್ಲಿ ಓಡಾಡುವಂತ ವಾಹನ ಸವಾರರು ಸಮಸ್ಯೆ ಎದುರಿಸುವಂತೆ ಅಗಿದೆ. ಹೆದ್ದಾರಿಯಲ್ಲಿ 2 ಅಡಿಯಷ್ಟು ನೀರು ನಿಂತಿದ್ದು, ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆಯಾಗಿದೆ.