ಟೀಮ್​ ಇಂಡಿಯಾ ಕೋಚ್ ಸೀಟಿನ ಮೇಲೆ ಆಸೀಸ್ ಮಾಜಿ​ ಆಟಗಾರನ ಕಣ್ಣು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾ ಕೋಚ್ ಬದಲಾಗಿದ್ದಾರೆ. ಇದೀಗ ಯಾರಾಗಲಿದ್ದಾರೆ ನೂತನ ಕೋಚ್ ಎಂಬ ಬಿಸಿ ಬಿಸಿ ಚರ್ಚೆಯ ಶುರುವಾಗಿದೆ.

ಈಮಧ್ಯೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು,ಭಾರತ ತಂಡದ ಮುಖ್ಯ ಕೋಚ್ ಸ್ಥಾನವು ಅಸಾಮಾನ್ಯ ಪಾತ್ರವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಒಲವು ತೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ಮುನ್ನ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಲ್ಯಾಂಗರ್, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ.

ಇತ್ತ ಸೋಮವಾರ ಬಿಸಿಸಿಐ ಕೋಚ್ ಹುದ್ದೆಗಾಗಿ(Team India Coach) ಬಿಸಿಸಿಐ(BCCI) ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

ಶುಕ್ರವಾರವಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರುಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ.

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!