ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಒಟ್ಟು 3.02 ಕೋಟಿ ಮೌಲ್ಯದ ಚರಾಸ್ತಿಯನ್ನು ಘೋಷಣೆ ಮಾಡಿದ್ದಾರೆ.
ಮೋದಿ ಅವರು 52,920 ರೂಪಾಯಿ ನಗದು ಹೊಂದಿದ್ದಾರೆ. ಜಮೀನು, ಮನೆ, ಕಾರು ಹೊಂದಿಲ್ಲ. ಮೋದಿ ಯಾವುದೇ ಕಂಪನಿಯಲ್ಲಿ ಷೇರು ಖರೀದಿಸಿಲ್ಲ, ಮ್ಯೂಚುವಲ್ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲ.
2018-19 ರ ಆರ್ಥಿಕ ವರ್ಷದಲ್ಲಿ 11,14,230 ರೂ. ಆದಾಯವಿದ್ದರೆ 2022-23 ರಲ್ಲಿ ಇದು 23,56,080 ರೂ.ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಪ್ರಧಾನಿ ಮೋದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ. ಗಾಂಧಿನಗರ ಎಸ್‌ಬಿಐನ ಶಾಖೆಯಲ್ಲಿ 73,304 ರೂ.ಗಳನ್ನು ಠೇವಣಿ ಇರಿಸಿದ್ದರೆ, ವಾರಣಾಸಿ ಎಸ್‌ಬಿಐನ ಶಾಖೆಯಲ್ಲಿ ಕೇವಲ 7,000 ರೂ ಠೇವಣಿ ಇರಿಸಿದ್ದಾರೆ.
ಎಸ್‌ಬಿಐನಲ್ಲಿ 2,85,60,338 ರೂಪಾಯಿ ಮೌಲ್ಯದ ಫಿಕ್ಸೆಡ್ ಡೆಪಾಸಿಟ್ ಇಟ್ಟಿದ್ದಾರೆ. ಪ್ರಧಾನಿಯವರ ಬಳಿ 2,67,750 ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ. ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್‌ನಲ್ಲಿ 9,12,398 ರೂ. ಇದೆ ಎಂದು ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್ ನೀಡಿದರು.
Namo Namo iintha pradhani padediruva nave danyaru 🙏💐