ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯ 64ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಿಂದ ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ.
ಸನ್‌ರೈಸರ್ಸ್ ಎದುರು ಹೀನಾಯ ಸೋಲು ಅನುಭವಿಸಿದ್ದ ಲಖನೌ, ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಇದೀಗ ತಂಡ ಕೂಡಿಕೊಂಡಿದ್ದಾರೆ. ಡೇವಿಡ್ ವಾರ್ನರ್ ಹೊರಬಿದ್ದಿದ್ದಾರೆ.
ಲಖನೌ ಸೂಪರ್ ಜೈಂಟ್ಸ್ ತಂಡವು 12ರಲ್ಲಿ 6 ಗೆದ್ದು 12 ಅಂಕ ಸಂಪಾದಿಸಿದೆ. ಉಳಿದಿರುವ 2 ಪಂದ್ಯ ಗೆದ್ದರೆ ನಾಕೌಟ್ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಒಂದು ವೇಳೆ 1 ಪಂದ್ಯ ಸೋತರೂ ಲಖನೌ ತಂಡಕ್ಕೆ ಹಿನ್ನಡೆಯಾಗಲಿದ್ದು, ಆಗ ಚೆನ್ನೈ ಹಾಗೂ ಆರ್‌ಸಿಬಿಯ ಪ್ಲೇ-ಆಫ್ ಹಾದಿ ಸುಗಮವಾಗಲಿದೆ.
ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದುವರೆಗೂ 13 ಪಂದ್ಯಗಳನ್ನಾಡಿದ್ದು 6 ಗೆಲುವು ಹಾಗೂ 7 ಸೋಲು ಸಹಿತ 12 ಅಂಕ ಸಂಪಾದಿಸಿದೆ. ತಂಡಕ್ಕಿದು ಕೊನೆ ಪಂದ್ಯ. ದೊಡ್ಡ ಅಂತರದಲ್ಲಿ ಗೆದ್ದು, ಚೆನ್ನೈ, ಹೈದರಾಬಾದ್ ಹಾಗೂ ಆರ್‌ಸಿಬಿ ತಂಡಗಳನ್ನು ನೆಟ್ ರನ್‌ರೇಟ್‌ನಲ್ಲಿ ಹಿಂದಿಕ್ಕಲು ಸಾಧ್ಯವಾದರೆ ಮಾತ್ರ ಪ್ಲೇ-ಆಫ್‌ರೇಸ್‌ನಲ್ಲಿ ಜೀವಂತವಾಗಿ ಉಳಿಯಲಿದೆ.