ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಕೈಯಲ್ಲಿ ಆಗೋದಿಲ್ಲ ಅನ್ನೋ ಮಾತೇ ಇಲ್ಲ, ಅಟಲ್ ಸೇತುವನ್ನು ನಟಿ ರಶ್ಮಿಕಾ ಮಂದಣ್ಣ ಹಾಡಿ ಹೊಗಳಿದ್ದಾರೆ.
ಅಟಲ್ ಸೇತು ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.
ಭಾರತ ಈಗ ವೇಗವಾಗಿ ಸಾಗುತ್ತಿದೆ, ಎಲ್ಲೂ ನಿಲ್ಲುತ್ತಿಲ್ಲ. ಕಳೆದು ಹತ್ತು ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ ಎಂದಿದ್ದಾರೆ.