ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಹೊತ್ತಿದ್ದು, ಆರು ಮಂದಿ ಸಜೀವ ದಹನವಾಗಿದ್ದಾರೆ.
ತೆಲಂಗಾಣದ ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಚಿಲ್ಕಲೂರಿಪೇಟೆಯಲ್ಲಿ ಬುಧವಾರ ನಡೆದಿದೆ.
ಡಿಕ್ಕಿಯ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ರವಾನಿಸಲಾಗಿದೆ. ಬಸ್‌ನಲ್ಲಿ 42ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.
ಮೃತರನ್ನು ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯ ನಿವಾಸಿಗಳಾದ ಅಂಜಿ (35), ಉಪ್ಪಗುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55), ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿಲ್ಲ.