ಭೀಕರ ರಸ್ತೆ ಅಪಘಾತ: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಹೊಸ ದಿಗಂತ ವರದಿ ಪುತ್ತೂರು:

ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ (23) ಎಂಬವರು ಅಪಘಾತಕ್ಕೆ ಬಲಿಯಾದ ಯುವಕ.

ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗ್ಗಿನ ಜಾವ ಬೈಕನ್ನು ಸರ್ವಿಸ್ ಸ್ಟೇಷನ್ ಗೆ ಹೋಗಿ ಹಿಂತಿರುಗಿ ಬರುವ ಸಂದರ್ಭ ಅಲ್ಲಿಯೇ 100 ಮೀಟರ್ ಅಂತರದಲ್ಲಿ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಯುವಕನ ತಂದೆ ಆನಂದ ಗೌಡ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!