ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.
ಹಲವು ಮಂದಿ ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.
ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ’ ಎಂದು ಹೇಳಿದರು.
ಬಡವರಿಗೆ ಆಹಾರ ಸಿಗುವಂತಾಗಲು ಕಾಂಗ್ರೆಸ್ ಕಾನೂನು ತಂದಿದೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತ ಅಕ್ಕಿ ನೀಡಲಾಗುವುದು ಎಂದರು.