ಹೊಸದಿಗಂತ ವರದಿ,ಚಿತ್ರದುರ್ಗ:
ಧರ್ಮದ ಆಧಾರದ ಮೇಲೆ ಬಜೆಟ್ ಅನ್ನು ವಿಭಜಿಸುವುದು ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಪಿಂಪಲ್ಗಾಂವ್ ಬಸವಂತ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ಅಥವಾ ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ದೃಢವಾಗಿ ವಿರೋಧಿಸಿದ್ದರು ಎಂದು ತಿಳಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಟ್ಟು ಬಜೆಟ್‌ನಲ್ಲಿ ಶೇ 15ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಲು ಯೋಜನೆ ರೂಪಿಸಿತ್ತು.ನಾನು(ಗುಜರಾತ್‌ನ) ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಈ ಪ್ರಸ್ತಾವನೆ ತಂದಿತ್ತು. ಬಿಜೆಪಿ ಈ ಕ್ರಮವನ್ನು ಬಲವಾಗಿ ವಿರೋಧಿಸಿತು ಮತ್ತು ಆದ್ದರಿಂದ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ. ಆದರೆ ಕಾಂಗ್ರೆಸ್ ಈ ಪ್ರಸ್ತಾವನೆಯನ್ನು ಮತ್ತೆ ಜಾರಿಗೆ ತರಲು ಬಯಸಿದೆ ಎಂದು ಪ್ರಧಾನಿ ಹೇಳಿದರು.