ಭಾರತೀಯ ಫುಟ್​ಬಾಲ್ ದಂತಕಥೆ ಸುನಿಲ್ ಛೆಟ್ರಿ ನಿವೃತ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಫುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವುದಾಗಿ ಛೆಟ್ರಿ ಹೇಳಿದ್ದಾರೆ.

39 ವರ್ಷದ ಸುನಿಲ್ ಭಾರತ ಪರ ಇದುವರೆಗೆ 150 ಪಂದ್ಯಗಳನ್ನು ಆಡಿದ್ದಾರೆ. ಈ ಬಾರಿ 94 ಗೋಲು ಗಳಿಸಿ ಹೊಸ ದಾಖಲೆ ಬರೆದಿದ್ದಾರೆ . ಸುನಿಲ್ ಛೆಟ್ರಿ ಈಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದೊಂದಿಗೆ ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!