ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಹಾಸನ ಜಿಲ್ಲೆಯ ವಿವಿಧೆಡೆ ಶೋಧ ನಡೆಸಿದ್ದು, ಪ್ರೀತಂ ಗೌಡ ಅವರ ಆಪ್ತ ಸಹಾಯಕನ ಮನೆಯಿಂದ ಹತ್ತು ಪೆನ್ಡ್ರೈವ್ಗಳು, ಹಾರ್ಡ್ ಡಿಸ್ಕ್ ವಶಪಡಿಸಿಕೊಂಡಿದೆ.
ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್‌ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್ಡ್ರೈವ್ಗಳನ್ನು ಎಸ್‌ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಿದೆ.
ಪ್ರೀತಂ ಗೌಡ ಅವರ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಪೆನ್ಡ್ರೈವ್ ಗೂ ಪ್ರಜ್ವಲ್ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಳಿಕವಷ್ಟೇ ಗೊತ್ತಾಗಲಿದೆ.
ಹಾಸನದ 18 ಸ್ಥಳಗಳಲ್ಲಿ ಎಸ್‌ಐಟಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಅಪರಾಧ ನಡೆದ ಸ್ಥಳದಲ್ಲಿ ಪತ್ತೆಯಾದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಮರುಪಡೆಯಲಾದ ಹಾರ್ಡ್ ಡ್ರೈವ್‌ಗಳಲ್ಲಿನ ವೀಡಿಯೊಗಳನ್ನು ಸಹ ಪರಿಶೀಲಿಸಲಾಗುತ್ತದೆ. ಈ ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪ ಕೂಡ ಕೇಳಿಬಂದಿದೆ.