ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮನೆಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಪಿಯುಸಿ ವಿದ್ಯಾರ್ಥಿನಿ ಮೃತ ದುರ್ದೈವಿ.
ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಭುದ್ಧ ಈ ಹಿಂದೆ ಎರಡು-ಮೂರು ಬಾರಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಇದೀಗ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕುವಿನಿಂದ ಕುತ್ತಿಗೆ ಹಾಗೂ ಕೈಯನ್ನ ಕೊಯ್ದುಕೊಂಡಿದ್ದಾಳೆ ಎನ್ನಲಾಗುತ್ತಿದೆ. ತಾಯಿ ಕೆಲಸಕ್ಕೆ ಹೋದ ವೇಳೆ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಪ್ರಭುದ್ಧ ತಮ್ಮ ಮನೆಗೆ ಬಂದು ನೋಡಿದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.
ಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸದ ವಿಚಾರಕ್ಕೆ ಸಾವನ್ನಪ್ಪಿದ್ದಾಳಾ ಅಥವಾ ಬೇರೆ ಕಾರಣ ಇದೆಯಾ? ಅನ್ನೋ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.